ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಇಬ್ಬರು ಸಾವು, ನಾಲ್ವರಿಗೆ ಗಾಯ

ತಮಿಳುನಾಡಿನ ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.

ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್(21) ಮತ್ತು ವಿಜಯ್(25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ. ಸೆಲ್ವಂ(21), ಪ್ರಶಾಂತ್(20), ಸೆಂಧುರ್ಕನಿ(45), ಮುತ್ತುಮರಿ(41) ಗಂಭೀರವಾಗಿ ಗಾಯಗೊಂಡಿದ್ದು, ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಮುಖ್ಯಮಂತ್ರಿಗಳು ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

https://twitter.com/ANI/status/1830070998437413294

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read