HomeIndiaBIG NEWS: ಮತ್ತೊಂದು ದುರಂತ; ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 10 ಜನರು ದುರ್ಮರಣ

BIG NEWS: ಮತ್ತೊಂದು ದುರಂತ; ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 10 ಜನರು ದುರ್ಮರಣ

ಚೆನ್ನೈ: ಬೆಂಗಳೂರಿನ ಅತ್ತಿಬೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಸಂಭವಿಸಿದ ಪಟಾಕಿ ಗೋಡೌನ್ ಬೆಂಕಿ ಅವಘಡದಲ್ಲಿ 14 ಜನರು ಸಜೀವ ದಹನಗೊಂಡಿರುವ ಘಟನೆ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಇಂತದ್ದೇ ದುರಂತ ಸಂಭವಿಸಿದೆ.

ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಾಲೂರಿನಲ್ಲಿ ಖಾಸಗಿ ಪಟಾಕಿ ತಯಾರಿಕಾ ಘಟಕ ಸ್ಫೋಟಗೊಂಡಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಮಿಕರು ಪಟಾಕಿ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಳಿಗ್ಗೆ 9:30ರ ಸುಮಾರಿಗೆ ಸ್ಫೋಟಗೊಂಡಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. 10 ಜನ ಕಾರ್ಮಿಕರು ಸಜೀವ ದಹನ ಹೊಂದಿದ್ದಾರೆ. ಇಬ್ಬರ ಮೃತದೇಹಗಳು ಮಾತ್ರ ಪತ್ತೆಯಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular