ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ.
ಕೋಯಮತ್ತೂರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯನ್ನು ಮಾಡಲ್ಲ ಎಂದು ಹೇಳಿದ್ದಾರೆ.
ನಾವೆಲ್ಲರೂ ಒಗ್ಗಟ್ತಿನಿಂದ ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತೇವೆ. ಪಕ್ಷಕ್ಕೆ ಉಜ್ವಲ ಭವಿಷ್ಯವಿರಬೇಕು ಎಂದು ಬಯಸುತ್ತೇನೆ. ಈ ಬಾರಿ ನಾನು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ . ಯಾವುದೇ ರಾಜಕೀಯ ಊಹಾಪೋಹಗಳಿಗೂ ಉತ್ತರಿಸಲ್ಲ ಎಂದಿದ್ದಾರೆ.
ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಪ್ರತಿ ಪಕ್ಷದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದರೆ ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ನೈನಾರ್ ನಾಗೇಂದ್ರ ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.