ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಾಗೇಂದ್ರನ್ ನೇಮಕಗೊಂಡಿದ್ದಾರೆ.
ಚೆನ್ನೈನ ತ್ಯಾಗರಾಯನಗರದಲ್ಲಿರುವ ಕಮಲಾಲಯದಲ್ಲಿ ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಡೆದಿದ್ದು, ತಿರುವನ್ವೇಲಿ ಶಾಸಕ ನೈನಾರ್ ನಾಗೇಂದ್ರ ಮಾತ್ರ ನಾಮಪತ್ರ ಸಲ್ಲಿಸಿದ್ದರು. ನಾಗೇಂದ್ರನ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಅಲ್ಲದೇ ಅಣ್ಣಾಮಲೈ ಸ್ವಇಚ್ಛೆಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೈನಾರ್ ರಾನೇಂದ್ರ ಅವರನ್ನು ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ವರಿಷ್ಠರಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎನ್ನಲಾಗಿದೆ.