HomeIndiaBREAKING: ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಲು ವಿಜಯ್ ನಿರ್ಧಾರ: ಪೆರಂಬೂರು ಕ್ಷೇತ್ರದ ಶಾಸಕರಾಗಿ ಮುಂದುವರೆಯಲು...

BREAKING: ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಲು ವಿಜಯ್ ನಿರ್ಧಾರ: ಪೆರಂಬೂರು ಕ್ಷೇತ್ರದ ಶಾಸಕರಾಗಿ ಮುಂದುವರೆಯಲು ತೀರ್ಮಾನ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ದಾಖಲೆ ಬರೆದಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ (ತಮಿಳಿಗ ವೆಟ್ರಿ ಕಳಗಂ) ಪಕ್ಷ ಸರ್ಕಾರ ರಚನೆಗೆ ಮುಂದಾಗಿದೆ. ನಟ ದಳಪತಿ ವಿಜಯ್ ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ನೂತನ ಪಕ್ಷ ಸ್ಥಾಪನೆಯೊಂದಿಗೆ ಮೊದಕ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಬರೋಬ್ಬರಿ 108 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ನಟ ದಳಪತಿ ವಿಜಯ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿಯೂ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿರುಚ್ಚಿ ಪೂರ್ವ ಹಾಗೂ ಪೆರಂಬೂರು ಈ ಎರಡೂ ಕ್ಷೇತ್ರಗಳಲ್ಲಿ ವಿಜಯ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀದಲಿದ್ದಾರೆ. ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರದಿಂದ ಶಾಸಕರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ.

ವಿಜಯ್ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕು.ಪ.ಕೃಷ್ಣನ್ ಅವರಿಗೆ ಟಿವಿಕೆ ಟಿಕೆಟ್ ನೀಡಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಸಭೆ ನಡೆಸಿ ಟಿವಿಕೆ ತಿರುಚ್ಚಿ ಪೂರ್ವ ಕ್ಷೇತ್ರದಿಂದ ಕೃಷ್ಣನ್ ಅವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಲಿದೆ ಎಂದು ತಿಳಿದುಬಂದಿದೆ.

ಇನ್ನು ತಮಿಳುನಾಡಿನಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನಟ ವಿಜಯ್ ಇಂದು ಪಕ್ಷದ ಕಚೇರಿಯಲ್ಲಿ ಮೊದಲ ಸಭೆ ನಡೆಸಲಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಹಾಗೂ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ತಮಿಳುನಾಡಿನಲ್ಲಿ ದಳಪತಿ ವಿಜಯ್ ಯುಗಾರಂಭವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular