ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ವಿರುಧನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಸ್ಫೋಟದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಘಟನಾ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.