HomeLatest NewsBIG NEWS: ಬ್ಲ್ಯಾಕ್ ಆ್ಯಂಡ್ ವೈಟ್ ಸೂಟ್ ಧರಿಸುತ್ತಿರುವುದಕ್ಕೆ ಕಾರಣ ತಿಳಿಸಿದ ತಮಿಳುನಾಡು ಸಿಎಂ ವಿಜಯ್

BIG NEWS: ಬ್ಲ್ಯಾಕ್ ಆ್ಯಂಡ್ ವೈಟ್ ಸೂಟ್ ಧರಿಸುತ್ತಿರುವುದಕ್ಕೆ ಕಾರಣ ತಿಳಿಸಿದ ತಮಿಳುನಾಡು ಸಿಎಂ ವಿಜಯ್

ಚೆನ್ನೈ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ದ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿ, ನೂತನ ಮುಖ್ಯಮಂತ್ರಿಯಾಗಿರುವ ಜೋಸೆಫ್ ವಿಜಯ್ ತನ್ನ ವಿರುದ್ಧದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.

ವಿಜಯ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಕಪ್ಪು ಹಾಗೂ ಬಿಳಿ ಬಣ್ಣದ ಸೂಟು, ಬೂಟುಗಳಲ್ಲಿ ಕಾಣಿಸಿಕೊಂಡಿದ್ದರು. ಅಧಿಕಾರ ಸ್ವೀಕಾರಿಸಿದ ಬಳಿಕವೂ ಬ್ಲ್ಯಾಕ್ ಆಂಡ್ ವೈಟ್ ಸೂಟು ಬೂಟಿನಲ್ಲಿಯೇ ಗಮನ ಸೆಳೆಯುತ್ತಿದ್ದಾರೆ. ವಿಜಯ್ ಅವರ ಸೂಟು ಬೂಟಿನ ಬಗ್ಗೆ ಭಾರಿ ಚರ್ಚೆ ಆರಂಭವಾಗಿತ್ತು. ವಿಪಕ್ಷಗಳು ಕೂಡ ಸಿಎಂ ಸೂಟಿನ ಬಗ್ಗೆ ಟೀಕಿಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಸಿಎಂ ವಿಜಯ್ ತಮ್ಮ ಸೂಟು ಬೂಟಿನ ಬಗ್ಗೆ ಸ್ಪಷ್ಟನೆ ನಡಿದ್ದಾರೆ.

ಸಾಮಾನ್ಯವಾಗಿ ತಮಿಳುನಾಡು ರಾಜಕಾರಣಿಗಳು ಧರಿಸುವ ಸಾಂಪ್ರದಾಯಿಕ ಬಿಳಿ ಶರ್ಟ್ ಮತ್ತು ಪಂಚೆ ಬದಲಿಗೆ, ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಕಪ್ಪು ಮತ್ತು ಬಿಳಿ ಬಣ್ಣದ ಕೋಟ್-ಸೂಟ್ ಧರಿಸಿ ಗಮನ ಸೆಳೆದಿದ್ದರು. ಆ ಬಳಿಕ ನಡೆದ ಎಲ್ಲಾ ಸರ್ಕಾರಿ ಸಭೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಅವರು ಇದೇ ಶೈಲಿಯ ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಇದೀಗ ಸಿಎಂ ವಿಜಯ್ ಅವರೇ ಈ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿರುಚಿರಾಪಳ್ಳಿಯಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ ಪಕ್ಷದ ಬೃಹತ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, ತಮ್ಮ ಉಡುಪಿನ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ‘ನಾವು ಕೋಟ್ ಮತ್ತು ಸೂಟ್ ಧರಿಸಬಾರದೇ? ಅದು ಕೇವಲ ಅಧಿಕಾರದಲ್ಲಿರುವ ದೊಡ್ಡ ಜನರಿಗೆ ಮಾತ್ರ ಸೀಮಿತವೇ? ಅಂತಹದ್ದೇನೂ ಇಲ್ಲ. ನಾನು ಹತ್ತಾರು ಬಣ್ಣಗಳ ಉಡುಪು ಧರಿಸುತ್ತಿಲ್ಲ. ನಮ್ಮೆಲ್ಲರ ಹೃದಯದಂತೆ ಕೇವಲ ಕಪ್ಪು ಮತ್ತು ಬಿಳಿ ಬಣ್ಣದ ಉಡುಪನ್ನು ಮಾತ್ರ ಧರಿಸುತ್ತಿದ್ದೇನೆ. ಆಡಳಿತದಲ್ಲಿ ನಾನು ಅತ್ಯಂತ ಸರಳವಾಗಿ ಮತ್ತು ಪಾರದರ್ಶಕವಾಗಿ ಇರುತ್ತೇನೆ ಎಂಬುದನ್ನು ತೋರಿಸಲು ಈ ಬ್ಲ್ಯಾಕ್ ಆ್ಯಂಡ್ ವೈಟ್ ಸೂಟ್ ಧರಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. ವಿಜಯ್ ಹೇಳಿಕೆಗೆ ಅಭಿಮಾನಿಗಳು ಭರಪೂರ ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ವಿಜಯ್ ಧರಿಸಿದ್ದ ಈ ಕಪ್ಪು ಬಣ್ಣದ ಸ್ಯೂಟ್, ಅವರು ನಟಿಸಿದ್ದ ‘ಬೀಸ್ಟ್’ ಸಿನಿಮಾದ ರಾ ಏಜೆಂಟ್ ಲುಕ್‌ನಿಂದ ಪ್ರೇರಿತವಾಗಿದೆ ಎನ್ನಲಾಗಿದೆ. ಈ ಐಕಾನಿಕ್ ಉಡುಪನ್ನು ಪ್ರಸಿದ್ಧ ಫ್ಯಾಷನ್ ಡಿಸೈನರ್‌ಗಳಾದ ‘ಜಾಫಿರ್ ಮತ್ತು ಶಾದಾಬ್’ ವಿನ್ಯಾಸಗೊಳಿಸಿದ್ದಾರೆ. .

ಇದೇ ವೇದಿಕೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ವಿಜಯ್, ನಾವು ಅಧಿಕಾರಕ್ಕೆ ಬಂದು ಇನ್ನು ಕೆಲವು ವಾರಗಳೂ ಆಗಿಲ್ಲ. ಆರು ತಿಂಗಳು ಸುಮ್ಮನಿರುತ್ತೇವೆ ಎಂದವರು ಆರು ದಿನವೂ ಕಾಯದೆ, ಅಧಿಕಾರ ವಹಿಸಿಕೊಂಡ ಅರ್ಧ ಗಂಟೆಯಲ್ಲೇ ದೂರು ನೀಡಲು ಆರಂಭಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮಿಳುನಾಡನ್ನು ಆಳುತ್ತಾ ಜನರನ್ನು ವಂಚಿಸಿದ ಎರಡು ಪ್ರಮುಖ ಪಕ್ಷಗಳನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ನೀವು ವಿಜಯ್‌ನನ್ನು ಕೇವಲ ಮುಖ್ಯಮಂತ್ರಿಯಾಗಿ ಅಲ್ಲ, ನಿಮ್ಮ ಮನೆಯ ಅಣ್ಣನಾಗಿ, ತಮ್ಮನಾಗಿ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುವ ಮುಖ್ಯ ಸೇವಕನಾಗಿ ಆಯ್ಕೆ ಮಾಡಿದ್ದೀರಿ. ನಿಮ್ಮ ಈ ಬೆಂಬಲಕ್ಕೆ ನಾನು ಸದಾ ಚಿರಋಣಿ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular