HomeIndiaBIG NEWS: ಕಂದಕಕ್ಕೆ ಉರುಳಿದ ಬಸ್; ಓರ್ವ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

BIG NEWS: ಕಂದಕಕ್ಕೆ ಉರುಳಿದ ಬಸ್; ಓರ್ವ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ಚೆನ್ನೈ: ಚಾಲಕನ ನಿಯಂತ್ರಣತಪ್ಪಿ ಬಸ್ ಕಂದಕ್ಕೆ ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದೆ.

ಚೆನ್ನೈನಿಂದ 45 ಪ್ರಯಾಣಿಕರನ್ನು ಹೊತ್ತು ಕೋಯಮತ್ತೂರ್ ಗೆ ಬಸ್ ತೆರಳುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ದುರಂತದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 20 ಜನರು ಗಾಯಗೊಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಪ್ರಯಾಣಿಕ ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆದಾಖಲಿಸಲಾಗಿದೆ. ಸ್ಥಳಕ್ಕೆ ಚಂಗಲ್ಪಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular