HomeKarnatakaBIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸ್ಯಾಟಲೈಟ್ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಸ್ ಚಾಲಕ ಗುಣಶೇಖರನ್ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 11ರ ಮಧ್ಯರಾತ್ರಿ ತಮಿಳುನಾಡಿನ ನಾಲ್ಕು ಸಾರಿಗೆ ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಾವೇರಿ ವಿವಾದಗಳ ನಡುವೆಯೇ ಇದೀಗ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular