HomeIndia10 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

10 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

ಚೆನ್ನೈ: 10 ವರ್ಷದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರ್ ನ ಸುಲೂರು ಪ್ರದ್ರ‍ೇಶದಲ್ಲಿ ನಡೆದಿದೆ.

ಇಲ್ಲಿನ ಕಣ್ಣಂಪಾಳಯಂ ಸರೋವರದ ಬಳಿ ಗಾಯಗಳಿಂದ ಕೂಡಿದ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ತಿಕ್ ಮತ್ತು ಮೋಹನ್ ರಾಜ್ ಬಂಧಿತ ಆರೋಪಿಗಳು. ಬಾಲಕಿ ಸುಲೂರು ಪ್ರದೇಶದ ತನ್ನ ಮನೆಯ ಹತ್ತಿರ ದಿನಸಿ ಖರೀದಿಸಲು ಅಂಗಡಿಗೆ ಹೋಗಿದ್ದಳು. ಈ ವೇಳೆ ಕಿಡಿಗೇಡಿಗಳು ಆಕೆಯನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕಿ ಕಿಡ್ನ್ಯಾಪ್ ಮತ್ತು ಕೊಲೆ ವಿಚಾರವಾಗಿ ನೂತನ ಸಿಎಂ ವಿಜಯ್ ಸರ್ಕಾರದ ವಿರುದ್ಧ ವಿಪಕ್ಷ ಡಿಎಂಕೆ ಹರಿಹಾಯ್ದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದೆ. ಪ್ರಕರಣ ರಾಜಕೀಯ ತಿರುವು ಪಡೆದಿದೆ.

ಈ ನಡುವೆ ಮುಖ್ಯಮಂತ್ರಿ ವಿಜಯ್ ಅವರಿಂದ ನ್ಯಾಯದ ಭರವಸೆ ಸಿಗುವವರೆಗೂ ನಾವು ಶವವನ್ನು ತೆಗೆದುಕೊಂಡು ಹೋಗುವುದಿಲ್ಲ. ಈ ರೀತಿಯ ಕೃತ್ಯಗಳು ಆಗಬಾರದು ಎಂದು ಬದಲಾವಣೆಗೆ ಮತ ಹಾಕಿದ್ದೇವೆ. ಆದರೆ, ಅವರು ಈಗ ಯಾವುದೇ ಹೇಳಿಕೆ ಅಥವಾ ಭರವಸೆ ನೀಡುತ್ತಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ಆಡಳಿತಕ್ಕೆ ಬಂದ ಹೊರತಾಗಿಯೂ, ಯಾವುದೇ ಬದಲಾವಣೆ ಆಗಿಲ್ಲ ಎಂದು ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಸುಲೂರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಕಾಣೆಯಾದ ಬಾಲಕಿ ಸರೋವರದ ದಡದಲ್ಲಿ ಶವವಾಗಿ ಸಿಕ್ಕಿದ್ದಾಳೆ. ಕುಟುಂಬದ ಜೊತೆಗೆ ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನ್ಯಾಯಕ್ಕಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ ಎಂದು ಸಂತ್ರಸ್ತೆ ಕುಟುಂಬದ ಸಂಬಂಧಿ ಸೆಂಥಿಲ್ ಕುಮಾರ್ ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ಬೆನ್ನಲ್ಲೇ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಸಂದೀಪ್ ರೈ ರಾಥೋಡ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular