HomeLatest NewsSHOCKING: ಆಟೋದಲ್ಲಿಯೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಗುಂಪಿನಿಂದ ಹಿಗ್ಗಾಮುಗಾ ಥಳಿತ: ವ್ಯಕ್ತಿ ಸಾವು

SHOCKING: ಆಟೋದಲ್ಲಿಯೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಗುಂಪಿನಿಂದ ಹಿಗ್ಗಾಮುಗಾ ಥಳಿತ: ವ್ಯಕ್ತಿ ಸಾವು

ಚೆನ್ನೈ: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಆಟೋದಲ್ಲಿ ಕುಳಿತು ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಸ್ಥಳೀಯ ಗುಂಪು ಆತನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಮಿಳುನಾಡಿನ ಚೆನ್ನೈನಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 30 ವರ್ಷದ ಕಲೈಸೆಲ್ವನ್ ಎಂದು ಗುರುತಿಸಲಾಗಿದೆ.ಸ್ನೇಹಿತರೊಂದಿಗೆ ಆತೋದಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ ಆಟೋದಲ್ಲಿಯೇ ಕುಳಿತು ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಹಿಳೆ ಹಾಗೂ ಕಲೈಸೆಲ್ವನ್ ನಡುವೆ ಗಲಾಟೆಯಾಗಿದೆ. ಸ್ಥಳೀಯರು ಸ್ಥಳಕ್ಕಾಗಮಿಸಿ ಕಲೈಸೆಲ್ವನ್ ನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ. ಹಲ್ಲೆಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣ ಆತನನ್ನು ಸ್ಟಾನ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಆತ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆ ನಡೆಸಿದವರ ಗುರುತು ಪತ್ತೆಗಾಗಿ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular