ಚೆನ್ನೈ: ಪ್ರಾಜೆಕ್ಟ್ ವರ್ಕ್ ಗಾಗಿ ಬಂದಿದ್ದ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿದ ದುಷ್ಕರ್ಮಿಗಳ ಗುಂಪು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಪ್ರಾಜೆಕ್ಟ್ ವರ್ಗ್ ಗಾಗಿ ತಿರುಚ್ಚಿಯಿಂದ ಚೆನ್ನೈಗೆ ವಿದ್ಯಾರ್ಥಿನಿ ಬಂದಿದ್ದಳು. ಈ ವೇಳೆ ಯುವಕರ ಗುಂಪೊಂದು ಕಾರಿನಲ್ಲಿ ಆಕೆಯನ್ನು ಕಿಡ್ನ್ಯಾಪ್ ಮಾಡಿದೆ. ಅಡ್ಯಾರ್ ನ ಖಾಸಗಿ ಹಾಸ್ಟೆಲ್ ನಿಂದ ವಿದ್ಯಾರ್ಥಿಯನ್ನು ಅಪಹರಿಸಿ, ಕಾರಿನಲ್ಲಿ ಕರೆದೊಯ್ಯಲಾಗಿದೆ. ಆಕೆಯ ಮುಖಕ್ಕೆ ನಿದ್ರಾಜನಕ ಪುಡಿಯನ್ನು ಹಚ್ಚಿ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌರ್ಜನ್ಯವೆಸಗಲಾಗಿದೆ.
ಬಳಿಕ ವಿದ್ಯಾರ್ಥಿನಿಯನ್ನು ಬೇರೆ ಸ್ಥಳದಲ್ಲಿ ಬಿಟ್ಟು ಹೋಗಿದ್ದಾರೆ. ವಿದ್ಯಾರ್ಥಿನಿಯ ದೂರಿನ ಬಳಿಕ ಅಭಿರಾಮಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆಯ ನಂತರ, ವಿದ್ಯಾರ್ಥಿನಿ ತನ್ನ ಆರೋಗ್ಯದಲ್ಲಿ ಬದಲಾವಣೆಗಳನ್ನು ಗಮನಿಸಿದರು. ಮಾರ್ಚ್ 10ರ ಸಂಜೆ ಚಿಕಿತ್ಸೆಗಾಗಿ ಅಡ್ಯಾರ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅದೇ ಗ್ಯಾಂಗ್ ಆಕೆಯನ್ನು ಮತ್ತೆ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದೆ. ಪೊಲೀಸರಿಗೆ ಮಾಹಿತಿ ನೀಡಿದರೆ ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದೆ. ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ವಿರುದ್ಧದ ಅಪರಾಧ (CAWC) ವಿಭಾಗವು ದೂರಿನ ತನಿಖೆ ನಡೆಸುತ್ತಿದೆ.

