HomeLatest NewsBREAKING: ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್ ಪ್ರಮಾಣವಚನ ಸ್ವೀಕಾರ: ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್...

BREAKING: ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್ ಪ್ರಮಾಣವಚನ ಸ್ವೀಕಾರ: ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭಾಗಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ (ತಮಿಳಿಗ ವೆಟ್ರಿ ಕಳಗಂ) ಪಕ್ಷ ಸರ್ಕಾರ ರಚನೆಗೆ ಮುಂದಾಗಿದ್ದು, ನಾಳೆಯಿಂದ ದ್ರಾವಿಡ ನಾಡಿನಲ್ಲಿ ವಿಜಯ್ ಆಳ್ವಿಕೆ ಯುಗಾರಂಭವಾಗಲಿದೆ.

ವಿಜಯ್ ನೇತೃತ್ವದ ಟಿವಿಕೆಪಕ್ಷಕ್ಕೆ ಕಾಂಗ್ರೆಸ್ ಈಗಾಗಲೇ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದ್ದು, ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ವಿಜಯ್ ಅವರನ್ನು ಭೇಟಿಯಾಗಿ ಈ ಬಗ್ಗೆ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು ಚುನಾವಣೆಯಲ್ಲಿ 108 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಜಯ್ ನೇತೃತ್ವದ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚಿಸಲು ಅಗತ್ಯವಿರುವ 118 ಮ್ಯಾಜಿಕ್ ಸಂಖ್ಯೆ ಪಡೆದಿಲ್ಲ. ಟಿವಿಕೆಗೆ ಇನ್ನೂ 10 ಶಾಸಕರ ಬೆಂಬಲದ ಅಗತ್ಯವಿರುವುದರಿಂದ ಕಾಂಗ್ರೆಸ್ ಬೆಂಬಲ ಘೋಷಿಸಿದೆ. ಆದರೂ ಇನ್ನೂ 5 ಶಾಸಕರ ಬೆಂಬಲ ಅಗತ್ಯವಿದೆ.

ಈ ನಡುವೆ ಟಿವಿಕೆ ಮುಖ್ಯಸ್ಥ ವಿಜಯ್ ಚೆನ್ನೈನಲ್ಲಿ ಲೋಕಭವನಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇಂದು ಮಧ್ಯಾಹ್ನ 3:30ಕ್ಕೆ ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಪ್ರಮಾಣವಚನ ಸ್ವೀಕಾರಕ್ಕೆ ಸಮಯ ಕೇಳಿದ್ದಾರೆ.

ವಿಜಯ್ ಸರ್ಕಾರ ರಚನೆಗೆ ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ. ನಾಳೆ ಪ್ರಮಾಣವಚನ ಸ್ವೀಕಾರಕ್ಕೂ ಸಮಯ ನಿಗದಿಯಾಗಿದೆ. ನಾಳೆ ಚೆನ್ನೈನ ನೆಹರು ಕ್ರೀಡಾಗಂಣದಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡು ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣವಚನ ಬೋಧಿಸಲಿದ್ದಾರೆ. ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular