ದಾಖಲೆ ರಹಿತ ವಸತಿ ಪ್ರದೇಶ ಕಂದಾಯ ಗ್ರಾಮಗಳಾಗಿ ಘೋಷಣೆ: 1.50 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಕಾರವಾರ: ರಾಜ್ಯದ 3800 ದಾಖಲೆ ರಹಿತ ವಸತಿ ಪ್ರದೇಶಗಳನ್ನು ಮುಂದಿನ ಆರು ತಿಂಗಳಲ್ಲಿ ಕಂದಾಯ ಗ್ರಾಮಗಳೆಂದು ಘೋಷಿಸಲಾಗುವುದು. ಆ ಗ್ರಾಮಗಳಲ್ಲಿ ವಾಸಿಸುವ 1.50 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಬಗರ್ ಹುಕುಂ ಸಾಗುವಳಿ ಚೀಟಿ, ಪಹಣಿ, ಪೋಡಿ ದಾಖಲೆ, ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.

ಬಗರ್ ಹುಕುಂ ಸಾಗುವಳಿದಾರರಿಂದ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಆಂದೋಲನದ ರೀತಿಯಲ್ಲಿ ಅರ್ಜಿಗಳ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಲಿದೆ ಎಂದು ಹೇಳಿದರು.

ವಿವಿಧ ಪ್ರದೇಶಗಳಲ್ಲಿ ತಾಂಡಾಗಳು, ಹಟ್ಟಿಗಳು, ಕ್ಯಾಂಪ್ ಗಳಿಗೆ ಅಧಿಕೃತ ಮಾನ್ಯತೆ ಇಲ್ಲದ ಕಾರಣ ಅವುಗಳಿಗೆ ಕಂದಾಯ ಗ್ರಾಮದ ಅಧಿಕಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಕ್ಕು ಪತ್ರ ಮಂಜೂರು ನಿಯಮವನ್ನು ಬಿಗಿ ಮಾಡಲಾಗಿದ್ದು, ಅರ್ಜಿದಾರರ ಹೆಸರಲ್ಲಿ ಜಮೀನು ಇದೆಯೇ, ಸಾಗುವಳಿ ನಡೆದಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಬಗರ್ ಹುಕುಂ ಸಮಿತಿಗಳ ನಡಾವಳಿಗಳನ್ನು ಡಿಜಿಟಲ್ ಮಾಡಲಾಗುವುದು. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅರ್ಹರಿಗೆ ಜಮೀನು ನೋಂದಣಿ ಮಾಡಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read