HomeLatest Newsಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಶಾಸಕ ತನ್ವೀರ್ ಸೇಠ್ ಅಸಮಾಧಾನ: ಕಾರ್ಯಕ್ರಮದಿಂದ ಹೊರ ನಡೆಯಲು...

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಶಾಸಕ ತನ್ವೀರ್ ಸೇಠ್ ಅಸಮಾಧಾನ: ಕಾರ್ಯಕ್ರಮದಿಂದ ಹೊರ ನಡೆಯಲು ಮುಂದಾದಾಗ ತಡೆದ ಗೃಹ ಸಚಿವ

ಮೈಸೂರು: ಮುಖ್ಯಮಂತ್ರಿ ಸಿದದ್ರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿಚಾರ ಇದೀಗ ಮತ್ತೆ ಭಾರಿ ಸುದ್ದಿಗೆ ಗ್ರಾಸವಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೂಡ ಅಸಮಾಧಾನಗೊಂಡಿದ್ದಾರೆ.

ಪೊಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಬಳಿ ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದಿಂದಲೇ ಹೊರ ನಡೆಯಲು ಮುಂದಾಗಿದ್ದ ಘಟನೆ ನಡೆದಿದೆ.

ಈ ವೇಳೆ ಸಚಿವ ಪರಮೇಶ್ವರ್​​ ತನ್ವೀರ್​ಸೇಠ್​ ಮನವೊಲಿಕೆ ಯತ್ನ ಮಾಡಿದ್ದು, ಜೊತೆಗೆ ಶಾಸಕ‌ ಅನಿಲ್​​ ಕೂಡ ಅವರನ್ನು ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ. ನಾನು ವೇದಿಕೆ ಮೇಲೆ ಬಂದರೆ ಬೇರೆ ಮಾತನಾಡುತ್ತೇನೆ ಎಂದಿದ್ದ ತನ್ವೀರ್ ಸೇಠ್, ಬಳಿಕ ಒಲ್ಲದ ಮನಸ್ಸಿನಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಟ್ಟಾರೆ ಸಿಎಂ ಪುತ್ರ ಎಂ ಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಕಾಂಗ್ರೆಸ್ ನ ಸಚಿವರು, ಶಾಸಕರಿಗೆ ಇರಿಸುಮುರಿಸು ಉಂಟುಮಾಡುತ್ತಿರುವುದಂತೂ ಸುಳ್ಳಲ್ಲ.

For Latest News Updates, Join Our Whatsapp Community🚩
RELATED ARTICLES

Most Popular