HomeEntertainmentನಟಿ ತಾರಾ ವಿರುದ್ಧ ಪ್ರಕರಣ ದಾಖಲು

ನಟಿ ತಾರಾ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ವಾಹನ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣೆ ಘೋಷಣೆಯಾದ ನಂತರ ನಿಗಮದ ವ್ಯವಸ್ಥಾಪಕರಿಗೆ ಸೇರಿದ ಕಾರ್ ಅನ್ನು ತಾರಾ ಬಳಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಪರಿಶೀಲನೆ ಬಳಿಕ ಸ್ಥಳೀಯ ಚುನಾವಣಾ ಸಂಚಾರ ವಿಚಕ್ಷಣ ದಳದ ಅಧಿಕಾರಿ ನೀಡಿದ ದೂರಿನ ಮೇರೆಗೆ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ಸರ್ಕಾರಿ ಕಾರ್ ಬಳಕೆ ಮಾಡುವಂತಿಲ್ಲ. ಹೀಗಿದ್ದರೂ ತಾರಾ ನಿಗಮದ ವ್ಯವಸ್ಥಾಪಕರ ಕಾರ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular