HomeEntertainmentBREAKING: ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ,...

BREAKING: ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ, ಹೈದರಾಬಾದ್ ಗೆ ಶಿಫ್ಟ್ ಸಾಧ್ಯತೆ

ಬೆಂಗಳೂರು: ತೆಲುಗು ನಟ ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಇಂದು ತಾರಕರತ್ನ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

ರಾತ್ರಿ 8.30 ರ ನಂತರ ಹೈದರಾಬಾದ್ ಆಸ್ಪತ್ರೆಗೆ ತಾರಕರತ್ನ ಅವರನ್ನು ಸ್ಥಳಾಂತರ ಮಾಡಲಾಗುವುದು. ಪ್ರಸ್ತುತ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ತಾರಕರತ್ನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆಯಿಂದ ಆಸ್ಪತ್ರೆ ಸಮೀಪ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ಬಳಿ ಜನವರಿ 27ರಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾ.ರಾ. ಲೋಕೇಶ್ ಅವರ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದರು. ತೀವ್ರ ಹೃದಯಘಾತವಾಗಿ ಕುಸಿದು ಬಿದ್ದ ಅವರನ್ನು ಕುಪ್ಪಂನ ಪಿಇಎಸ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular