HomeLatest NewsBREAKING: ದ್ವೇಷ ಭಾಷಣ ಕಾಯ್ದೆ ಜಾರಿಗೂ ಮುನ್ನವೇ ಪೊಲೀಸರಿಂದ ಬಿಜೆಪಿ ಮುಖಂಡನಿಗೆ ನೋಟಿಸ್: ವಿವಾದ ಸೃಷ್ಟಿಸಿದ...

BREAKING: ದ್ವೇಷ ಭಾಷಣ ಕಾಯ್ದೆ ಜಾರಿಗೂ ಮುನ್ನವೇ ಪೊಲೀಸರಿಂದ ಬಿಜೆಪಿ ಮುಖಂಡನಿಗೆ ನೋಟಿಸ್: ವಿವಾದ ಸೃಷ್ಟಿಸಿದ ತರಿಕೆರೆ ಪೊಲೀಸರ ಕ್ರಮ

ಚಿಕ್ಕಮಗಳೂರು: ರಾಜ್ಯದಲ್ಲಿ ದ್ವೇಷ ಬಹಷಣ ಕಾಯ್ದೆ ಇನ್ನೂ ಜಾರಿಗೆ ಬಂದಿಲ್ಲ. ಆದರೂ ಚಿಕ್ಕಮಗಳೂರು ಪೊಲೀಸರು ಬಿಜೆಪಿ ಮುಖಂಡರೊಬ್ಬರೊಗೆ ನೋಟಿಸ್ ಜಾರಿ ಮಾಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಪೊಲೀಸರು ದ್ವೇಷ ಭಾಷಣ ಕಾಯ್ದೆ ಉಲ್ಲಂಘಿಸದಂತೆ ಭಾಷಣ ಮಾಡಿ ಎಂದು ನೋಟಿಸ್ ನೀಡಿದ್ದಾರೆ. ಈ ನೋಟಿಸ್ ರಾಜ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ದ್ವೇಷ ಭಾಷಣ ಕಾಯ್ದೆ ಜಾರಿಗೂ ಮುನ್ನವೇ ಪೊಲೀಸರು ಇಂತಹ ನೋಟಿಸ್ ನೀಡಿರುವುದನ್ನು ಬಿಜೆಪಿ ಪ್ರಶ್ನಿಸಿದೆ? ರಾಜ್ಯದಲ್ಲಿ ದ್ವೇಷ ಭಾಷಣ ಕಾಯ್ದೆ ಜಾರಿಯಲ್ಲಿದೆಯೇ? ಕಾಯ್ದೆಗೆ ರಾಜ್ಯಪಾಲರ ಅಂಕಿತ ಬಿದ್ದಿದೆಯೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಸುರೇಶ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದ್ವೇಷ ಭಾಷಣ ಕಾಯ್ದೆ ಜಾರಿಗೂ ಮುನ್ನವೇ ತರಿಕೆರೆ ಪೊಲೀಸರು ನೋಟಿಸ್ ನೀಡಿರುವ ಕ್ರಮ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular