HomeEntertainmentನಾಳೆ ರಾಜ್ಯಾದ್ಯಂತ ತೆರೆ ಕಾಣಲಿದೆ 'ತತ್ಸಮ ತದ್ಭವ'

ನಾಳೆ ರಾಜ್ಯಾದ್ಯಂತ ತೆರೆ ಕಾಣಲಿದೆ ‘ತತ್ಸಮ ತದ್ಭವ’

ತತ್ಸಮ ತದ್ಭವ' - ಪಬ್ಲಿಕ್ ಟಿವಿ

ವಿಶಾಲ್ ಆತ್ರೇಯ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹು ನಿರೀಕ್ಷಿತ ‘ತತ್ಸಮ ತದ್ಭವ’ ಸಿನಿಮಾ ನಾಳೆ ರಾಜ್ಯದ್ಯಂತ ತೆರೆ ಕಾಣಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಧಾರಿತ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ನಟಿಸಿದ್ದು, ಮೇಘನಾ ರಾಜ್ ಸೇರಿದಂತೆ ಶೃತಿ, ಟಿಎಸ್ ನಾಗಾಭರಣ, ಗಿರಿಜಾ ಲೋಕೇಶ್. ರಾಜಶ್ರೀ ಪೊನ್ನಪ್ಪ. ಬಾಲಾಜಿ ಮನೋಹರ್, ಹಾಗೂ ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಮಹತಿ ವೈಷ್ಣವಿ ಭಟ್ ತೆರೆ ಹಂಚಿಕೊಂಡಿದ್ದಾರೆ.

ಪಿ ಬಿ ಸ್ಟುಡಿಯೋಸ್ ಹಾಗೂ ಅನ್ವಿತ್ ಸಿನಿಮಾಸ್ ಬ್ಯಾನರ್ ನಲ್ಲಿ ಪನ್ನಗ ಭರಣ, ಸ್ಪೂರ್ತಿ ಅನಿಲ್, ಚೇತನ್ ನಂಜುಂಡಯ್ಯ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರವಿ ಆರಾಧ್ಯ ಸಂಕಲನವಿದ್ದು, ಶ್ರೀನಿವಾಸ್ ರಾಮಯ್ಯ ಅವರ ಛಾಯಾಗ್ರಹಣವಿದೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ ನೀಡಿದ್ದಾರೆ. ಈಗಾಗಲೇ ಈ ಸಿನಿಮಾ ಟ್ರೈಲರ್ ಮೂಲಕವೇ  ಸಾಕಷ್ಟು ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular