ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ

BJP offered ₹50 crore to Congress MLAs but...': Siddaramaiah hints at  'Operation Lotus' in Karnataka | Mintಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ ಬಜೆಟ್ ನಲ್ಲಿ ಘೋಷಿಸಿದ್ದ ನಿರ್ಮಲಾ ಸೀತಾರಾಮನ್ ಒಂದು ರೂಪಾಯಿ ಕೊಡಲಿಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ ಎಂದು ಸೆಪ್ಟೆಂಬರ್ ನಲ್ಲೇ ಮನವಿ ಕೊಟ್ಟಿದ್ದರೂ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲಿಲ್ಲ. ಕೋರ್ಟ್ ಗೆ ಹೋದ ನಂತರ ಈಗ ಅಲ್ಪ ಅನುದಾನ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಸುಮಾರು 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 38 ಸಾವಿರ ಕೋಟಿ ರೂ. ಬೆಳೆ ನಷ್ಟವಾಗಿದೆ. ರೈತರು, ಜನ ಕಣ್ಣೀರಿನಲ್ಲಿ ಕೈತೊಳೆಯುವಂತಾಯಿತು. ನಾವು ನಮ್ಮ ಸಂಪನ್ಮೂಲಗಳಿಂದ 34 ಲಕ್ಷ ರೈತರಿಗೆ ಪರಿಹಾರ ಕೊಟ್ಟೆವು. ಆದರೆ, ಎನ್.ಡಿ.ಆರ್.ಎಫ್.ನಿಂದ 18172 ಕೋಟಿ ರೂ. ಕೊಡಿ ಎಂದು ಕೇಳಿದ್ದೆವು. ಆದರೆ ಒಂದು ರೂಪಾಯಿ ಕೊಡಲಿಲ್ಲ. ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ನಂತರ ಅಲ್ಪ ಅನುದಾನ ಕೊಟ್ಟಿದ್ದಾರೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಒಮ್ಮೆಯೂ ರಾಜ್ಯದ ಬಗ್ಗೆ ಮಾತನಾಡಲಿಲ್ಲ. ಇದು ಅಕ್ಷಮ್ಯ ಅಪರಾಧ ಸಂಸದರಾಗಿ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೊಡಿಸಲಿಲ್ಲ ಎಂದು ಟೀಕಿಸಿದರು.

ನಿಮ್ಮ ಪರವಾಗಿ ಯಾರು ಮಾತನಾಡುತ್ತಾರೋ ಯಾರು ಧ್ವನಿ ಎತ್ತುತ್ತಾರೋ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read