ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ.

ಯಾವುದೇ ಹಳದಿ ಬೋರ್ಡ್ ವಾಹನಗಳು ರಾಜ್ಯ ಪ್ರವೇಶಿಸಲು ತೆರಿಗೆ ಪಾವತಿ ಕಡ್ಡಾಯವಾಗಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿಗೆ ಪ್ರವಾಸಕ್ಕೆ ಬರುವ ಹೊರ ರಾಜ್ಯದ ಹಳದಿ ಬೋರ್ಡ್ ವಾಹನಗಳಿಗೆ ಪ್ರವೇಶ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ರಾಜ್ಯ ಪ್ರವೇಶಕ್ಕೆ ಮೊದಲು ಗಡಿಭಾಗದಲ್ಲಿ ವಿಶೇಷ ರಹದಾರಿ ಪಡೆಯಬೇಕಿದೆ. ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ವೀಕ್ಷಿಸಲು ಬರುವ ಪ್ರವಾಸಿ ವಾಹನಗಳಿಗೆ ಮಾತ್ರ ತೆರಿಗೆ ವಿನಾಯಿತಿ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read