HomeIndiaರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ತೆರಿಗೆ ಪಾಲಿನ 6310 ಕೋಟಿ ರೂ. ಬಿಡುಗಡೆ

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ತೆರಿಗೆ ಪಾಲಿನ 6310 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಹಂಚಿಕೆ ಮಾಡಿದೆ.

ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 ಕೋಟಿ ರೂ. ಬಿಡುಗಡೆ ಮಾಡಬೇಕಿತ್ತು. ಬದಲಾಗಿ ರಾಜ್ಯ ಸರ್ಕಾರಗಳಿಗೆ 1,73,030 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯಗಳು ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳಿಗೆ ಆರ್ಥಿಕ ನೆರವು ಒದಗಿಸಲು ಈ ತಿಂಗಳು ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಮಂತ್ರಾಲಯ ಮಾಹಿತಿ ನೀಡಿದೆ.

15ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇಕಡ 41ರಷ್ಟನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುವುದು. ಕರ್ನಾಟಕಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂಪಾಯಿಯನ್ನು ಶುಕ್ರವಾರ ಹಂಚಿಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular