8 ಸಹ ಶಿಕ್ಷಕರು ಅರೆಸ್ಟ್: ಶಿಕ್ಷಕರ ನೇಮಕಾತಿ ಅಕ್ರಮ ಕೇಸ್ ನಲ್ಲಿ ಬಂಧಿತರ ಸಂಖ್ಯೆ 69 ಕ್ಕೆ ಏರಿಕೆ

ಬೆಂಗಳೂರು: 2012 -15 ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಸಂಬಂಧ ಸಿಐಡಿ ಪೊಲೀಸರು ಮತ್ತೆ 8 ಸಹ ಶಿಕ್ಷಕರನ್ನು ಬಂಧಿಸಿದ್ದಾರೆ. ಇದುವರೆಗೆ 69 ಆರೋಪಿತ ಶಿಕ್ಷಕರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

2012 -13 ನೇ ಸಾಲಿನಲ್ಲಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಮದನಬಾವಿ ಶಾಲೆಯ ಶಿಕ್ಷಕ ಶ್ರೀಕಾಂತ್, ಬಸವನಬಾಗೇವಾಡಿ ಕೊಲ್ಹಾರ ಪ್ರೌಢಶಾಲೆಯ ಶಿಕ್ಷಕ ನಾಯಕ ಪ್ರಕಾಶ್ ರತ್ನು,  ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕಮರೂರು ಸರ್ಕಾರಿ ಶಾಲೆ ಸಹ ಶಿಕ್ಷಕ ಮಹಬೂಬ್ ಬಾಷಾ, ಉತ್ತರ ಕನ್ನಡ ಜಿಲ್ಲೆ ಮುಂಡಗೋಡು ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕಿ ಸುಜಾತ ಭಂಡಾರಿ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

2014 – 15ನೇ ಸಾಲಿನಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ನಾಲ್ವರು ಶಿಕ್ಷಕರನ್ನು ಬಂಧಿಸಲಾಗಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆ ಕೊರಟಗೆರೆ ತಾಲೂಕಿನ ಬುಕ್ಕಾಪಟ್ಟಣ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕಿ ದೀಪಾರಾಣಿ, ಮಧುಗಿರಿ ಶೈಕ್ಷಣಿಕ ಜಿಲ್ಲೆ ಪಾವಗಡ ತಾಲೂಕಿನ ನಾಗಲಮಡಿಕೆ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಮೋಹನ್ ಕುಮಾರ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಶಾಂತಿಲಾಲ್ ಚೌಹಾಣ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read