SSLC ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಬೇಕಾದ ಶಿಕ್ಷಕನೊಬ್ಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯ ಬೆಳಕಿಗೆ ಬಂದಿದೆ. ಈ ಘಟನೆ‌ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

ಮಾರಪ್ಪ (45) ಎಂಬ ಶಿಕ್ಷಕನೇ ಈ ಕೃತ್ಯ ಎಸಗಿದ ಆರೋಪಿ. ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿನಿಯನ್ನು ಏಕಾಂಗಿಯಾಗಿ ಕಂಡ ಮಾರಪ್ಪ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಪೋಷಕರ ದೂರಿನ ಮೇರೆಗೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಈ ಘಟನೆಯು ಶಾಲಾ ವಾತಾವರಣದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಶಿಕ್ಷಕನ ಈ ಕೃತ್ಯದಿಂದ ವಿದ್ಯಾರ್ಥಿನಿಯ ಪೋಷಕರು ಆತಂಕಗೊಂಡಿದ್ದಾರೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read