HomeLatest Newsಮಾಜಿ ಸಂಸದ ಡಿ.ಕೆ. ಸುರೇಶ್ ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಶಿಕ್ಷಕಿ ಅರೆಸ್ಟ್

ಮಾಜಿ ಸಂಸದ ಡಿ.ಕೆ. ಸುರೇಶ್ ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಶಿಕ್ಷಕಿ ಅರೆಸ್ಟ್

ರಾಮನಗರ: ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಮಹಿಳೆಯನ್ನು ರಾಮನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕಿ ಪವಿತ್ರಾ ಬಂಧಿತ ಮಹಿಳೆ. ಮೈಸೂರಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಪವಿತ್ರಾ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದವರಾಗಿದ್ದಾರೆ. ಪತಿಯಿಂದ ವಿಚ್ಛೇದನ ಪಡೆದಿರುವ ಅವರು ಮೈಸೂರಿನಲ್ಲಿ ವಾಸವಾಗಿದ್ದಾರೆ.

ಮೈಸೂರಿನಲ್ಲಿ ಅಕ್ಕಪಕ್ಕದ ಮನೆಯವರ ಕಿರಿಕಿರಿಯಿಂದಾಗಿ ಡಿ.ಕೆ. ಸುರೇಶ್ ಹೆಸರು ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಡಿ.ಕೆ. ಸುರೇಶ್ ಪತ್ನಿ ಎಂದರೆ ಜನ ಹೆದರುತ್ತಾರೆ ಎನ್ನುವ ಕಾರಣಕ್ಕೆ ತಾನು ಡಿ.ಕೆ. ಸುರೇಶ್ ಪತ್ನಿ ಎಂದು ಹೇಳಿಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹರಿಬಿಟ್ಟಿದ್ದರು. ಡಿ.ಕೆ ಸುರೇಶ್ ಅವರ ಪರವಾಗಿ ವಕೀಲ ಪ್ರದೀಪ್ ರಾಮನಗರ ಸಿಇಎನ್ ಠಾಣೆಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular