ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಅರೆಸ್ಟ್

ಫಗ್ವಾರ: ಪಂಜಾಬ್ ಬ ಫಗ್ವಾರದಲ್ಲಿ ಆರನೇ ತರಗತಿಯ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿನ ಎಲ್‌ಸಿಡಿ ಪರದೆಯಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯವಾಗಿ ಸನ್ನೆ ಮಾಡಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶಾಲಾ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಶಿಕ್ಷಕ ರಾಜೀವ್ ಶರ್ಮಾ ಅವರನ್ನು ಬಂಧಿಸಲಾಗಿದೆ ಎಂದು ಸತ್ನಾಂಪುರ ಎಸ್‌ಹೆಚ್‌ಒ ಗುರಿಂದರ್ಜಿತ್ ಸಿಂಗ್ ತಿಳಿಸಿದ್ದಾರೆ.

ಆರೋಪಿಯು ಗೋಬಿಂದಪುರ ಮೊಹಲ್ಲಾದ ಸರ್ಕಾರಿ ಮಿಡಲ್ ಸ್ಮಾರ್ಟ್ ಶಾಲೆಯಲ್ಲಿ ಶಿಕ್ಷಕನಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read