HomeKarnatakaರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಆನವೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

9ನೇ ತರಗತಿ ವಿದ್ಯಾರ್ಥಿ ಸುಮಂತ್ ಮೇಲೆ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಪೇಪರ್ ಅನ್ನು ಕಸದ ಬುಟ್ಟಿಗೆ ಎಸೆಯುವಾಗ ವಿದ್ಯಾರ್ಥಿನಿಗೆ ತಾಗಿತ್ತು. ಹುಡುಗರು ತೊಂದರೆ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಕಂಪ್ಯೂಟರ್ ಶಿಕ್ಷಕನ ಬಳಿ ದೂರು ನೀಡಿದ್ದರು. ವಿದ್ಯಾರ್ಥಿ ಸುಮಂತನಿಗೆ ಶಿಕ್ಷಕ ಥಳಿಸಿದ್ದಾನೆ. ಸುಮಂತ್ ತೀವ್ರವಾಗಿ ಗಾಯಗೊಂಡು ರಕ್ತ ಹೆಪ್ಪುಗಟ್ಟಿ ಜ್ವರ ಬಂದ ಹಿನ್ನೆಲೆಯಲ್ಲಿ ನಾನು ವಸತಿ ಶಾಲೆಯಲ್ಲಿ ಇರುವುದಿಲ್ಲ ಎಂದು ಪೋಷಕರಿಗೆ ಹೇಳಿದ್ದ. ನನ್ನನ್ನು ಕರೆದುಕೊಂಡು ಹೋಗಿ ಎಂದು ಪೋಷಕರಿಗೆ ತಿಳಿಸಿದ್ದ. ಪೋಷಕರು ಹೋದಾಗ ತೀವ್ರವಾದ ಜ್ವರದಿಂದ ಬಳಲುತ್ತಿದ್ದ ಕೂಡಲೇ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದಾರೆ. ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular