HomeKarnatakaಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ, 30 ದಿನ ಗಳಿಕೆ ರಜೆ, ವಿಶೇಷ...

ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ, 30 ದಿನ ಗಳಿಕೆ ರಜೆ, ವಿಶೇಷ ಭತ್ಯೆ ನೀಡಲು ಸರ್ಕಾರಕ್ಕೆ ಮನವಿ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನೀಡಬೇಕು. 30 ದಿನ ಗಳಿಕೆ ರಜೆ ನೀಡಬೇಕು ಎಂದು ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದಿಂದ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಈ ಕುರಿತಾಗಿ ಸಂಘದ ಅಧ್ಯಕ್ಷ ಕೆ. ಕೃಷ್ಣಪ್ಪ ಪತ್ರ ಬರೆದಿದ್ದಾರೆ. ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವೇತನ ಶ್ರೇಣಿ ಪಡೆದುಕೊಂಡು ಪ್ರಾಥಮಿಕ ಶಾಲಾ ಬಡ್ತಿ ಮುಖ್ಯ ಶಿಕ್ಷಕರ ಹುದ್ದೆಯನ್ನು ನಿರ್ವಹಿಸುತ್ತಿರುವವರಿಗೆ ಪ್ರತ್ಯೇಕ ವೇತನ ಶ್ರೇಣಿ ನೀಡಬೇಕು. ಒಂದೇ ಹುದ್ದೆಯಲ್ಲಿ 20 ರಿಂದ 30 ವರ್ಷ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ವಿಶೇಷ ಭತ್ಯೆ ನೀಡುತ್ತಿರುವುದು ಸಂರೋಷದ ವಿಷಯ. ಆದರೆ, ಬಡ್ತಿ ಪಡೆದ ನಂತರ ಮುಖ್ಯ ಶಿಕ್ಷಕರು ಈ ಅವಕಾಶದಿಂದ ವಂಚಿತರಾಗುತ್ತಿದ್ದು, ಅವರಿಗೂ ಸೌಲಭ್ಯ ನೀಡಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರೌಢಶಾಲೆ ಮುಖ್ಯ ಶಿಕ್ಷಕರಿಗೆ ನೀಡುತ್ತಿರುವ 30 ದಿನ ಗಳಿಕೆ ರಜೆಯನ್ನು ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಿಗೂ ನೀಡಬೇಕು. ಶಾಲಾ ಶಿಕ್ಷಣ ಸಂಯೋಜಕರ ಹುದ್ದೆಗೆ ಸೇವಾ ಹಿರಿತನ ಪರಿಕಣಿಸಿ ಪರೀಕ್ಷೆ ಇಲ್ಲದೆ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular