ಚಾಮರಾಜನಗರ: ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಎಸ್.ಡಿ.ವಿ.ಎಸ್. ಶಾಲೆಯಲ್ಲಿ ನಡೆದಿದೆ.
11 ವರ್ಷದ ಬಾಲಕನ ಮೇಲೆ ಶಿಕ್ಷಕಿ ಭಾನುಮತಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. 5ನೇ ತರಗತಿ ವಿದ್ಯಾರ್ಥಿ ಗುರುಪ್ರಸಾದ್ ಶೌಚಾಲಯಕ್ಕೆ ಹೋಗಲು ಅನುಮತಿ ಕೇಳಿದ್ದಾನೆ. ಈ ವೇಳೆ ಶಿಕ್ಷಕಿ ಹೊಡೆದಿದ್ದು, ಅವರ ಹೊಡೆತಕ್ಕೆ ವಿದ್ಯಾರ್ಥಿ ಗುರುಪ್ರಸಾದ್ ಮೂರ್ಛೆ ಹೋಗಿದ್ದಾನೆ. ವಿದ್ಯಾರ್ಥಿ ಪ್ರಜ್ಞೆ ತಪ್ಪುತಿದ್ದಂತೆ ಶಿಕ್ಷಕಿ ಭಾನುಮತಿ ಪರಾರಿಯಾಗಿದ್ದಾರೆ. ಯಳಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗೆ ಚಿಕಿತ್ಸೆ ಕೊಡಿಸಲಾಗಿದೆ. ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಳಂದೂರು ಪೊಳೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.