ಶಿಕ್ಷಕಿಯ ಸ್ಕೂಟಿ ಅಡ್ಡಗಟ್ಟಿ ಸರಗಳ್ಳತನ: ಬುಲೆಟ್ ಬೈಕ್ ನಲ್ಲಿ ಬಂದು ಕೃತ್ಯ

ತುಮಕೂರು: ಶಾಲೆಯಿಂದ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ಶಿಕ್ಷಕಿಯೊಬ್ಬರ ಬೈಕ್ ಅಡ್ಡಗಟ್ಟಿದ ಖದೀಮರು, ಆಕೆಯ ಸರ ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಮರಿಸಿದ್ದಯ್ಯನಪಾಳ್ಯದಲ್ಲಿ ನಡೆದಿದೆ.

ಮರಿಸಿದ್ದಯ್ಯನ ಪಾಳ್ಯದ ಪ್ರಾಥಮಿಕ ಶಾಲೆ ಶಿಕ್ಷಕಿ ರೇಖಾ ತಮ್ಮ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬುಲೆಟ್ ಬೈಕ್ ನಲ್ಲಿ ಬಂದ ಕಳ್ಳರು, ಶಿಕ್ಷಕಿಯ ಎರಡು ಸರಕದ್ದು ಎಸ್ಕೇಪ್ ಆಗಿದ್ದಾರೆ. ಈ ವೇಳೆ ಶಿಕ್ಷಕಿ ಕಳ್ಳರು ಬುಲೆಟ್ ಗಾಡಿಯಲ್ಲಿ ತೆರಳುತ್ತಿರುವುದನ್ನು ವಿಡಿಯೋ ಮಾಡಿಕೊಳ್ಳಲು ಮುಂದಾಗುತ್ತಿದ್ದಂತೆ ಮತ್ತೆ ಬಂದ ಖದೀಮರು ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಆಕೆ ಬಳಿ ಇದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಗಾಯಾಳು ಶಿಕ್ಷಕಿ ರೇಖಾ ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರೆ. ಹೊನ್ನವಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read