HomeKarnatakaಆ. 23, 24 ಬೇಡಿಕೆ ಈಡೇರಿಸಲು ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ

ಆ. 23, 24 ಬೇಡಿಕೆ ಈಡೇರಿಸಲು ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘದಿಂದ ಆಗಸ್ಟ್ 23, 24ರಂದು ಶಾಲೆ ತೊರೆಯುವ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ಸಂಘದ ಅಧ್ಯಕ್ಷ ಎನ್.ಹೆಚ್. ಹನುಮಂತ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 10 -12 ವರ್ಷಗಳಿಂದ ಸೇವಾ ಭದ್ರತೆ ಇಲ್ಲದೆ ಕಡಿಮೆ ವೇತನಕ್ಕೆ ಶಿಕ್ಷಕರು ದುಡಿಯುತ್ತಿದ್ದಾರೆ. ಕಳೆದ ತಿಂಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೇಡಿಕೆ ಈಡೇರಿಸಲು ಹೋರಾಟ ನಡೆಸಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ರಾಜ್ಯಾದ್ಯಂತ ಎರಡು ದಿನ ಎಲ್ಲಾ ಅತಿಥಿ ಶಿಕ್ಷಕರು ಶಾಲೆ ತೊರೆಯುವ ಅಭಿಯಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತಿಥಿ ಶಿಕ್ಷಕರಿಗೆ ಸೇವಾ ಹಿರಿತನ ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕು. ಕೆಲಸದ ವೇಳೆ ಕಾಯಂ ಹುದ್ದೆ ಭರ್ತಿಯಾದಲ್ಲಿ ಬಿಡುಗಡೆ ಮಾಡಬಾರದು. ಸರಿಯಾಗಿ ವೇತನ ಕೊಡಬೇಕು. ಕಾಯಂ ಶಿಕ್ಷಕರ ಹಾಜರಾತಿಯಲ್ಲಿ ಅತಿಥಿ ಶಿಕ್ಷಕರ ವಿಲೀನಗೊಳಿಸಬೇಕು. ಇಎಲ್, ಸಿಎಲ್, ಮಹಿಳೆಯರಿಗೆ ಹೆರಿಗೆ ರಜೆ ನೀಡಬೇಕು. ದೆಹಲಿ, ಪಂಜಾಬ್ ಮಾದರಿಯಲ್ಲಿ ರಾಜ್ಯದಲ್ಲಿಯೂ ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಸೂಕ್ತ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular