HomeKarnataka15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಸಿದ್ಧತೆಗೆ ಸೂಚನೆ

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಸಿದ್ಧತೆಗೆ ಸೂಚನೆ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಡಿಡಿಪಿಐಗಳಿಗೆ ಸೂಚನೆ ನೀಡಿದೆ.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಉಳಿದ 26 ಶೈಕ್ಷಣಿಕ ಜಿಲ್ಲೆಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

1:1 ಅಂತಿಮ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಅಭ್ಯರ್ಥಿಗಳ ವೈದ್ಯಕೀಯ ಪ್ರಮಾಣ ಪತ್ರ, ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ, ಸಿಂಧುತ್ವ, ಗ್ರಾಮೀಣ ಪ್ರಮಾಣ ಪತ್ರ, ಕನ್ನಡ ಮಾಧ್ಯಮ, ಮಾಜಿ ಸೈನಿಕರ ಪ್ರಮಾಣ ಪತ್ರ, ವಿಕಲಚೇತನರ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ ಸಂಬಂಧಿಸಿದ ಎಲ್ಲ ಮೂಲ ಅಂಕಪಟ್ಟಿಗಳು, ಪ್ರಮಾಣ ಪತ್ರ, ಸೇವಾ ನಿರತ ಶಿಕ್ಷಕರು ಸಲ್ಲಿಸಿರುವ ನಿರಾಕ್ಷೇಪಣಾ ಪ್ರಮಾಣ ಪತ್ರದ ನೈಜತ್ವ ಪರಿಶೀಲನೆಗೊಳಪಡಿಸಲು ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಮಾರ್ಚ್ 8 ರಂದು ಶಿಕ್ಷಕರ ನೇಮಕಾತಿಯ ಅಂತಿಮ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಅಂತಿಮ ಪಟ್ಟಿಯಲ್ಲಿ 13,351 ಅಭ್ಯರ್ಥಿಗಳಿದ್ದಾರೆ, ಇವರಲ್ಲಿ 4,194 ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಉಪ ನಿರ್ದೇಶಕರುಗಳಿಗೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular