HomeKarnatakaSHOCKING: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

SHOCKING: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ದಾವಣಗೆರೆ: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾದ ಶಿಕ್ಷಕ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಮಾಯಕೊಂಡ ಸರ್ಕಾರಿ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದಿದೆ.

ನಾಗರಾಜು(46) ಮೃತಪಟ್ಟ ಶಿಕ್ಷಕ ಎಂದು ಹೇಳಲಾಗಿದೆ. ವಿಜ್ಞಾನ ಶಿಕ್ಷಕರಾಗಿರುವ ನಾಗರಾಜು ಬೆಳಗ್ಗೆ 11 ಗಂಟೆ ಸುಮಾರಿಗೆ ತರಗತಿಯಲ್ಲಿ ಮಕ್ಕಳಿಗೆ ಪಾಠ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಅಸ್ವಸ್ಥರಾಗಿದ್ದ ಅವರನ್ನು ಸಹೋದ್ಯೋಗಿಗಳು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಹೋಗುವ ವೇಳೆಗಾಗಲೇ ನಾಗರಾಜು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಮೂಲತಃ ಹರಪನಹಳ್ಳಿ ತಾಲೂಕು ತಾವರಗುಂದಿ ಗ್ರಾಮದವರಾದ ನಾಗರಾಜು ಮಾಯಕೊಂಡದ ಕೆಪಿಎಸ್ ಪ್ರೌಢಶಾಲೆಯಲ್ಲಿ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಶಿಕ್ಷಕರು, ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular