HomeKarnatakaಶಿಕ್ಷಕರು, ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಯೋಮಿತಿ 2 ವರ್ಷ ಸಡಿಲಿಕೆ

ಶಿಕ್ಷಕರು, ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಯೋಮಿತಿ 2 ವರ್ಷ ಸಡಿಲಿಕೆ

ಬೆಂಗಳೂರು: ಶಿಕ್ಷಕರು, ಉಪನ್ಯಾಸಕರ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಸಡಿಲಿಕೆ ಮಾಡಲಾಗಿದೆ. ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿ ಸಂದರ್ಭದಲ್ಲಿ ವಯೋಮಿತಿಯನ್ನು ಎರಡು ವರ್ಷ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೊರೋನಾ ಸಂದರ್ಭದಲ್ಲಿ ಎರಡು ವರ್ಷ ನೇಮಕಾತಿ ನಡೆಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು, ಸರ್ಕಾರಿ, ಅನುದಾನಿತ ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗಳಿಗೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ನಡೆಸಲಾಗುವ ನೇರ ನೇಮಕಾತಿಗಳಿಗೆ ಎರಡು ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾಗಿ ಅಭ್ಯರ್ಥಿಗಳು, ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳಿಂದ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಯೋಮಿತಿ ಸಡಿಲಿಕೆ ಮಾಡಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳ ನೇಮಕಾತಿ ಮತ್ತು ಶಾಲಾ ಶಿಕ್ಷಕರ ನೇಮಕಾತಿಗೆ ಈ ಆದೇಶ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular