HomeKarnataka10,500 ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯುಕ್ತಿ ನಂತರ ಕೌನ್ಸೆಲಿಂಗ್ ಮೂಲಕ ಸಾಮಾನ್ಯ ವರ್ಗಾವಣೆ

10,500 ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯುಕ್ತಿ ನಂತರ ಕೌನ್ಸೆಲಿಂಗ್ ಮೂಲಕ ಸಾಮಾನ್ಯ ವರ್ಗಾವಣೆ

ಬೆಂಗಳೂರು: ಹೊಸ ನೀತಿಯ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಮಕ್ಕಳು ಸಂಖ್ಯೆ ಕಡಿಮೆ ಇರುವ ಶಾಲೆಗಳಲ್ಲಿರುವ 10,500 ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರು ಎಂದು ಶಿಕ್ಷಣ ಇಲಾಖೆ ಪಟ್ಟಿ ಮಾಡಿದೆ.

ಒಂದರಿಂದ ಐದನೇ ತರಗತಿಯವರೆಗೆ 40 ವಿದ್ಯಾರ್ಥಿಗಳಿಗೆ, ಆರರಿಂದ ಎಂಟನೇ ತರಗತಿಯವರೆಗೆ 35 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರಂತೆ ಸರ್ಕಾರದಿಂದ ಅನುಪಾತ ನಿಗದಿ ಮಾಡಲಾಗಿದ್ದು, ಇದಕ್ಕೆ ಅನುಗುಣವಾಗಿ ರಾಜ್ಯದ ಶಾಲೆಗಳಲ್ಲಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳ ಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಶಿಕ್ಷಕರ ಪಟ್ಟಿ ತಯಾರಿಸಿ ಅಗತ್ಯವಿರುವ ಬೇರೆ ಶಾಲೆಗಳಿಗೆ ಅವರನ್ನು ವರ್ಗಾವಣೆ ಮಾಡಲಾಗುತ್ತಿದ್ದು, ಈ ಸಲ 10,500 ಶಿಕ್ಷಕರು ಹೆಚ್ಚುವರಿ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ಗಾವಣೆಗೆ ಮುನ್ನವೇ ಅವರಿಗೆ ಸ್ಥಳ ನಿಯೋಜಿಸಲಾಗುತ್ತಿದ್ದು, ಬಳಿಕ ಉಳಿಯುವ ಖಾಲಿ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸಾಮಾನ್ಯ ವರ್ಗಾವಣೆ ಮಾಡಲಾಗುವುದು. 1 ರಿಂದ 8 ನೇ ತರಗತಿ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 1.53 ಲಕ್ಷ ಶಿಕ್ಷಕರಿದ್ದು, ಶೇ. 7 ರಷ್ಟು ಶಿಕ್ಷಕರು ವರ್ಗಾವಣೆಗೆ ಅವಕಾಶ ಪಡೆಯಲಿದ್ದಾರೆ. ಈ ಬಾರಿ 10,700 ಪ್ರಾಥಮಿಕ ಶಾಲೆ ಶಿಕ್ಷಕರು ವರ್ಗಾವಣೆಗೆ ಅರ್ಹತೆ ಪಡೆಯುವರು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular