HomeLatest NewsBREAKING: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ನಾಪತ್ತೆ

BREAKING: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ನಾಪತ್ತೆ

ಕೋಲಾರ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ಬರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

50 ವರ್ಷದ ಅಖ್ತರ್ ಬೇಗಂ ನಾಪತ್ತೆಯಾಗಿರುವ ಶಿಕ್ಷಕಿ. ಕೋಲಾರ ತಾಲೂಕಿನ ಕೆ.ಬಿ.ಹೊಸಳ್ಳಿ ಶಾಲಾ ಶಿಕ್ಷಕಿ. ಕೋಲಾರದ ಅಂತರಗಂಗೆ ರಸ್ತೆಯಲ್ಲಿ ವಾಸವಾಗಿದ್ದರು. ಕೋಲಾರದ ನರಸಾಪುರದಲ್ಲಿ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದರು. ಈಗ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.

ನಿನ್ನೆ ಬೆಳಿಗ್ಗೆಯಿಂದ ಅಖ್ತರ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಮೊಬೈಲ್ ಬೇರೆ ಮನೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಐಡಿ ಕಾರ್ಡ್ ಮಾತ್ರ ತೆಗೆದುಕೊಂಡು ಹೋಗಿದ್ದಾರೆ. ಆತಂಕಕ್ಕೊಳಗಾಗಿರುವ ಕುಟುಂಬ ಕೋಲಾರ ಠಾಣೆಯಲ್ಲಿ ದೂರು ದಾಖಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular