ವಾರಾಣಸಿ: ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ವಾಅರಾಣಸಿಯಲ್ಲಿ ನಡೆದಿದೆ.
ಮೂವರು ಸೇರಿ ಶಿಕ್ಷಕರೊಬ್ಬರನ್ನು ಹತ್ಯೆ ಮಾಡಿದ್ದಾರೆ. ಪ್ರವೀಣ್ ಜಾ (48) ಕೊಲೆಯಾದ ಶಿಕ್ಷಕ. ಕೊಲೆ ಮಾಡಿರುವ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹನ ನಿಲುಗಡೆ ವಿಚಾರವಾಗಿ ಪ್ರವೀಣ್ ಜಾ ಹಾಗೂ ಆದರ್ಶ್ ಅಸಿಂಗ್ ನಡುವೆ ಗಲಾಟೆಯಾಗಿದೆ. ಆದರ್ಶ ಜೊತೆ ಸೇರಿಕೊಂಡ ಇನ್ನಿಬ್ಬರು ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪ್ರವೀಣ್ ಅವರನ್ನು ಇಟ್ಟಿಗೆ ಹಾಗೂ ಕಬ್ಬಿಣದ ಸರಳಿನಿಂದ ಹೊಡೆಯಲಾಗಿದೆ. ಪ್ರವೀಣ್ ಗಂಭೀರವಾಗಿ ಹಲ್ಲೆಗೊಳಗಾಗಿದ್ದರು.
ಗಂಭೀರವಾಗಿ ಗಾಯಗೊಂಡ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಪ್ರವೀಣ್ ಕುಟುಂಬದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.