ಸರ್ಕಾರಿ, ಅನುದಾನಿತ ಶಾಲೆಗಳ ಶಿಕ್ಷಕರಿಗೆ ಮುಖ್ಯ ಮಾಹಿತಿ: ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ

ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕನಿಷ್ಠ 10 ವರ್ಷ ತೃಪ್ತಿದಾಯಕ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು, ಮುಖ್ಯ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.

ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಜುಲೈ 31 ರವರೆಗೆ ಶಿಕ್ಷಣ ಇಲಾಖೆಯ http://school education.kar.nic.in ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಶಿಕ್ಷಕರ ವೈಯಕ್ತಿಕ, ಶೈಕ್ಷಣಿಕ, ವಿವಿಧ ಕ್ಷೇತ್ರದ ಸಾಧನೆ ಒಳಗೊಂಡ ಸಮಗ್ರ ಮಾಹಿತಿಯನ್ನು ಕಳೆದ 5 ವರ್ಷಗಳ ಅಂಕಿ ಅಂಶಗಳನ್ನು ಸಲ್ಲಿಸಬೇಕಿದೆ. ಒಂದು ಬಾರಿ ಪ್ರಶಸ್ತಿ ಪಡೆದವರು, ಗಂಭೀರ ಆರೋಪ, ಇಲಾಖೆ ವಿಚಾರಣೆ, ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರು ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read