ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಡೆಯಾಜ್ಞೆ ತೆರವು

ಬೆಂಗಳೂರು: ಆರರಿಂದ ಎಂಟನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಯಥಾಸ್ಥಿತಿ ಕಾಪಾಡುವಂತೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ನೇಮಕಾತಿ ಗೊಂದಲಕ್ಕೆ ತೆರೆ ಬಿದ್ದಿದೆ.

ವಿವಾಹಿತ ಅಭ್ಯರ್ಥಿಗಳ ವಿಚಾರದಲ್ಲಿ ತಂದೆ ಅಥವಾ ಪತಿಯ ಪೈಕಿ ಯಾರ ಆದಾಯ ಪ್ರಮಾಣ ಪತ್ರ ಪರಿಗಣಿಸಬೇಕೆಂಬ ಗೊಂದಲಕ್ಕೆ ಪರಿಹಾರವಾಗಿ ಹಿಂದಿನ ನಿಯಮಗಳ ಪ್ರಕಾರವೇ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಶಿಕ್ಷಕರ ನೇಮಕಾತಿಯಲ್ಲಿ ಆದಾಯ ಪ್ರಮಾಣ ಪತ್ರ ವಿಚಾರವಾಗಿ ಮದುವೆಯಾಗಿರುವ ಶಿಕ್ಷಕರ ಹುದ್ದೆ ಆಕಾಂಕ್ಷಿಗಳು ತಂದೆ ಅಥವಾ ಪತಿ ಇಬ್ಬರಲ್ಲಿ ಯಾರ ಆದಾಯ ಪ್ರಮಾಣ ಪತ್ರ ನೀಡಬೇಕೆಂಬ ಗೊಂದಲ ವಿಚಾರವಾಗಿ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹಿಂದಿನ ನಿಯಮಗಳಂತೆ ಪ್ರಕ್ರಿಯೆ ಮುಂದುವರೆಸಲು ತಿಳಿಸಿ ವಿಚಾರಣೆಯನ್ನು ಮುಂದೂಡಿದೆ.

ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸದ ಕಾರಣ ಇದುವರೆಗೂ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರು ಆದೇಶ ಪ್ರತಿ ಪಡೆದುಕೊಂಡು ಕೆಲಸಕ್ಕೆ ವರದಿ ಮಾಡಿಕೊಳ್ಳಲು ಅನುಕೂಲವಾಗಲಿದೆ.

ಶಾಲಾ ಶಿಕ್ಷಣ ಇಲಾಖೆ 2023ರ ನವೆಂಬರ್ ನಿಂದಲೇ ನೇಮಕಾತಿ ಆದೇಶ ಪ್ರತಿಯನ್ನು ಅರ್ಹರಿಗೆ ವಿತರಿಸುತ್ತಿದೆ. 13,352 ಮಂದಿ ಶಿಕ್ಷಕರು ಆಯ್ಕೆಯಾಗಿದ್ದು, ವಿವಾಹಿತೆಯರು ತಂದೆಯ ಆದಾಯ ಪ್ರಮಾಣ ಪತ್ರ ನೀಡಿ ನೇಮಕವಾಗಿರುವುದನ್ನು ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ತಡೆಯಾಜ್ಞೆ ತೆರವುಗೊಳಿಸಿದ ಸುಪ್ರೀಂ ಕೋರ್ಟ್ ಹಿಂದಿನ ನಿಯಮಗಳ ಪ್ರಕಾರ ನೇಮಕಾತಿ ಪ್ರಕ್ರಿಯೆ ಮುಂದುವರಿಸುವಂತೆ ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read