HomeKarnatakaವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ 8,000 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತಾಲೂಕುವಾರು ಹುದ್ದೆಗಳ ಹಂಚಿಕೆ ಪಟ್ಟಿ ಬಿಡುಗಡೆ ಮಾಡಿದೆ.

ಮುಂದಿನ ಒಂದು ವಾರದಲ್ಲಿ ಈ ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮೊದಲ ಸುತ್ತಿನಲ್ಲಿ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಈಗ ಮಂಜೂರಾದ 8000 ಹುದ್ದೆಗಳು ಸೇರಿದಂತೆ ಒಟ್ಟು 35,000 ಅತಿಥಿ ಶಿಕ್ಷಕರ ಹುದ್ದೆಗಳು ಇವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಶಿಕ್ಷಕರ ವರ್ಗಾವಣೆಯಿಂದ ಖಾಲಿಯಾದ ಹುದ್ದೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ ಅತಿಥಿ ಶಿಕ್ಷಕರನ್ನು ಷರತ್ತುಗಳ ಅನ್ವಯ ನೇಮಕ ಮಾಡಿ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular