HomeKarnatakaಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15000 ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಮಾಹಿತಿ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15000 ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿ ಸೂಚಿಸಿರುವ ಪ್ರಕಾರ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಸೇರಿದಂತೆ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ 5000 ಹುದ್ದೆಗಳ ಭರ್ತಿಗೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಇದನ್ನು ಹೊರತುಪಡಿಸಿ ಇನ್ನೂ 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular