HomeKarnataka52,321 ಶಿಕ್ಷಕರ ಹುದ್ದೆ ಖಾಲಿ: 10,000 ಅತಿಥಿ ಶಿಕ್ಷಕರ ನೇಮಕಾತಿ ಹಿನ್ನಲೆ ಸರ್ಕಾರಿ ಶಾಲೆಗಳ ಖಾಲಿ...

52,321 ಶಿಕ್ಷಕರ ಹುದ್ದೆ ಖಾಲಿ: 10,000 ಅತಿಥಿ ಶಿಕ್ಷಕರ ನೇಮಕಾತಿ ಹಿನ್ನಲೆ ಸರ್ಕಾರಿ ಶಾಲೆಗಳ ಖಾಲಿ ಹುದ್ದೆ ಮಾಹಿತಿಗೆ ಸೂಚನೆ

ಬೆಂಗಳೂರು: ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಹಾಯ ಶಿಕ್ಷಕರ ಹುದ್ದೆಗಳ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ 12 ಗಂಟೆ ಒಳಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯಿಂದ ಎಲ್ಲಾ ಜಿಲ್ಲಾ ಉಪನಿರ್ದೇಶಕರು ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಿಗೆ 1.88 ಲಕ್ಷ ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಇವುಗಳಲ್ಲಿ 52,321 ಹುದ್ದೆಗಳು ಖಾಲಿ ಇವೆ. ಇದರಲ್ಲಿ 43,245 ಸಹ ಶಿಕ್ಷಕರ ಹುದ್ದೆಗಳು ಸೇರಿದ್ದು, ಮೊದಲ ಹಂತದಲ್ಲಿ 26,970 ಹುದ್ದೆಗಳನ್ನು ಅತಿಥಿ ಶಿಕ್ಷಕರ ಮೂಲಕ ಭರ್ತಿ ಮಾಡಲಾಗಿದೆ. ಮತ್ತೆ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ಮೇರೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular