HomeKarnatakaಪದವೀಧರ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ: ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಪದವೀಧರ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ: ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಬೆಂಗಳೂರು: ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. 4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲೆ ಸಹ ಶಿಕ್ಷಕರ ವೃಂದದ ತರಬೇತಿ ಹೊಂದಿದ ಪದವೀಧರ ಶಿಕ್ಷಕರ ಮರು ಹೊಂದಾಣಿಕೆಗೆ ಸೂಚನೆ ನೀಡಲಾಗಿದೆ.

4 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಇದರಿಂದಾಗಿ ಎರಡು ಸಾವಿರಕ್ಕೂ ಅಧಿಕ ಶಿಕ್ಷಕರಿಗೆ ಅನುಕೂಲವಾಗುತ್ತದೆ. ಎಂಟನೇ ತರಗತಿಗೆ ಶೂನ್ಯ ದಾಖಲಾತಿ ಇರುವ ಸರ್ಕಾರಿ ಶಾಲೆಗಳ ಪ್ರಾಥಮಿಕ ಶಾಲೆಗಳ ಪದವೀಧರ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಗಣಿತ ಮತ್ತು ವಿಜ್ಞಾನ ಹುದ್ದೆಗಳಿಗೆ ಮರು ಹೊಂದಾಣಿಕೆ ಮಾಡಿ ಸ್ಥಳ ನಿಯುಕ್ತಿಗೊಳಿಸುವಂತೆ ಪ್ರೌಢಶಿಕ್ಷಣ ಇಲಾಖೆ ವತಿಯಿಂದ ಡಿಡಿಪಿಐಗಳು ಮತ್ತು ಬಿಇಒಗಳಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರರಿಂದ ಎಂಟನೇ ತರಗತಿ ಬೋಧನೆಗಾಗಿ ಹೊಸದಾಗಿ ನೇಮಕ ಮಾಡಿಕೊಂಡ 13,151 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆ ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular