HomeKarnatakaBREAKING NEWS: ಶಿಕ್ಷಕಿಯಿಂದ ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪೋಷಕರು, ಹಿಂದೂ ಸಂಘಟನೆ ಕಾರ್ಯಕರ್ತರಿಂದ...

BREAKING NEWS: ಶಿಕ್ಷಕಿಯಿಂದ ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪೋಷಕರು, ಹಿಂದೂ ಸಂಘಟನೆ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು: ಶಿಕ್ಷಕಿಯೊಬ್ಬರು ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದ್ದು, ಪೋಷಕರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಪ್ರಭಾ ಎಂಬುವವರ ವಿರುದ್ಧ ಆರೋಪ ಕೇಳಿಬಂದಿದೆ. ಶ್ರೀರಾಮ ಹಾಗೂ ಅಯೋಧ್ಯೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಿಂದ ಪ್ರಯೋಜನವೇನು? ಅಯೋಧ್ಯೆಯಲ್ಲಿ ರಾಮನ ಮೂರ್ತಿ ಸ್ಥಾಪಿಸಿದರೆ ರಾಮ ಬರ್ತಾನಾ? ಎಂದು ಹೇಳಿದ್ದಾರೆ ಎನ್ನಲಾಗಿದೆ.

ಶಿಕ್ಷಕಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು ಹಾಗೂ ಹಿಂದೂ ಸಂಘಟನಾ ಕಾರ್ಯಕರ್ತರು ಶಿಕ್ಷಣ ಸಂಸ್ಥೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular