HomeIndiaಅಶ್ಲೀಲ ವಿಡಿಯೋ ಕಳುಹಿಸಿ ಶಿಕ್ಷಕಿಗೆ ಬ್ಲ್ಯಾಕ್ ಮೇಲ್: ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್

ಅಶ್ಲೀಲ ವಿಡಿಯೋ ಕಳುಹಿಸಿ ಶಿಕ್ಷಕಿಗೆ ಬ್ಲ್ಯಾಕ್ ಮೇಲ್: ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್

ಲಖನೌ: ಶಿಕ್ಷಕಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಘಟನೆ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ಮೂವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕಿ ವಿದ್ಯಾರ್ಥಿಗೆ ತನ್ನ ಮನೆಯಲ್ಲಿ ಟ್ಯೂಷನ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದರು. ಶಿಕ್ಷಕಿ ಸ್ನಾನಕ್ಕೆ ಹೋಗಿದ್ದ ವೇಳೆ ಆಕೆಯ ಸ್ನಾನದ ದೃಶ್ಯವನ್ನು ವಿದ್ಯಾರ್ಥಿ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದ. ಈ ವಿಡಿಯೋವನ್ನು ಶಿಕ್ಷಕಿಗೆ ಕಳುಹಿಸಿ ತನ್ನ ಜೊತೆ ಸಹಕರಿಸುವಂತೆ ವಿದ್ಯಾರ್ಥಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕಿ ನಿರಾಕರಿಸಿದಾಗ ಅದೇ ವಿಡಿಯೋವನ್ನು ತನ್ನ ಸ್ನೇಹಿತರಿಗೂ ಕಳುಹಿಸಿದ್ದಾನೆ. ಬಳಿಕ ಇನ್ ಸ್ಟಾಗ್ರಾಂ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ ಕಿರಾತಕರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮನನೊಂದ ಶಿಕ್ಷಕಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಮಿಷನ್ ಶಕ್ತಿ ಅಭಿಯಾನದ ತಂಡ ಮಧ್ಯಪ್ರವೇಶ ಮಾಡಿ ಆಗ್ರಾ ಪೊಲೀಸರಿಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಆರೋಪಿ ವಿದ್ಯಾರ್ಥಿ ಹಾಗೂ ಆತನ ಮೂವರು ಸ್ನೇಹಿತರನ್ನು ಬಂಧಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular