HomeKarnatakaSHOCKING NEWS: 5ನೇ ತರಗತಿ ವಿದ್ಯಾರ್ಥಿನಿ ಮೆಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ: ಕಾಮುಕ ಅರೆಸ್ಟ್

SHOCKING NEWS: 5ನೇ ತರಗತಿ ವಿದ್ಯಾರ್ಥಿನಿ ಮೆಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ: ಕಾಮುಕ ಅರೆಸ್ಟ್

ಕಲಬುರ್ಗಿ: ಶಿಕ್ಷಕಿಗೆ ಸಹ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಬದುಕಿನ ಪಾಠ ಹೇಳಿ ಮಾರ್ಗದರ್ಶನ ನೀಡಬೇಕಾದ ಗುರುವೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

5ನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ, ಶಾಲೆ ಮುಗಿದ ಬಳಿಕ ವಿದ್ಯಾರ್ಥಿನಿಯನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎನ್ನಲಾಗಿದೆ.

ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular