HomeKarnatakaವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಟ್ರಾನ್ಸ್ಪರ್ ಗೆ ‘ಸಬ್ಜೆಕ್ಟ್’ ಸಮಸ್ಯೆ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಟ್ರಾನ್ಸ್ಪರ್ ಗೆ ‘ಸಬ್ಜೆಕ್ಟ್’ ಸಮಸ್ಯೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ವಿಷಯವಾರು ವರ್ಗಾವಣೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.

ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು ಎಲ್ಲಾ ವಿಷಯಗಳನ್ನು ಪಾಠ ಮಾಡಬೇಕು. ಆದರೆ, ವರ್ಗಾವಣೆ ವಿಚಾರದಲ್ಲಿ ವಿಷಯ ಪರಿಗಣಿಸಲಾಗುತ್ತಿದೆ. ಇದು ಸಾಮಾನ್ಯ ವರ್ಗಾವಣೆ ಬಯಸಿದ ಶಿಕ್ಷಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ವಿಷಯವಾರು ವರ್ಗಾವಣೆ ನಡೆಯುತ್ತಿರುವುದರಿಂದ ಶಿಕ್ಷಕರು ಬಯಸಿದ ಶಾಲೆಯಲ್ಲಿ ವಿಷಯದ ಹುದ್ದೆ ಖಾಲಿ ಇಲ್ಲದ ಕಾರಣ ವರ್ಗಾವಣೆಗೆ ಸಮಸ್ಯೆ ಎದುರಾಗಿದೆ. ಇದರಿಂದ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಟೀಚರ್ ಗಳ ಹುದ್ದೆ ಭರ್ತಿ ಆಗದಂತಾಗಿದೆ. ವಿಜ್ಞಾನ, ಗಣಿತ, ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ನಾಲ್ಕು ವಿಷಯವಾರು ವರ್ಗಾವಣೆ ನಡೆಸಲಾಗುತ್ತಿದ್ದು, ರಾಜ್ಯದ 46,000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1.30 ಲಕ್ಷ ಶಿಕ್ಷಕರಿದ್ದಾರೆ. 30,000 ಹುದ್ದೆಗಳು ಖಾಲಿ ಇದ್ದು, ವಿಷಯವಾರು ವರ್ಗಾವಣೆಯಿಂದ ಕೆಲವು ಶಾಲೆಗಳಲ್ಲಿ ಹುದ್ದೆಗಳ ಅವಶ್ಯಕತೆ ಇದ್ದರೂ ಬೇರೆ ಶಾಲೆಯಲ್ಲಿ ಪಾಠ ಮಾಡುತ್ತಿರುವ ಶಿಕ್ಷಕರನ್ನು ವರ್ಗಾವಣೆ ಮಾಡಲು ಸಬ್ಜೆಕ್ಟ್ ಅಡ್ಡಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular