ಹೈದರಾಬಾದ್: ಸಹೋದ್ಯೋಗಿಗಳಿಂದಲೇ ಅಸಭ್ಯ ವರ್ತನೆ, ಕಿರುಕುಳ ತಾಳಲಾರದೇ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ 29 ವರ್ಷದ ಶಿಕ್ಷಕಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶಿಕ್ಷಕಿ ಅಸ್ಸಾಂ ಮೂಲದವರು. ಇಬ್ಬರು ಸಹೋದ್ಯೋಗಿಗಳು ಶಿಕ್ಷಕಿಗೆ ಕಿರುಕುಳ ನೀಡುತ್ತಿದ್ದರಂತೆ. ಅಸಭ್ಯವಾಗಿ ವರ್ತಿಸುತ್ತಿದರಂತೆ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಿಕ್ಷಕಿಯ ಪತಿ ಆದಿಬಾಟ್ಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನ್ನ ಪತ್ನಿಗೆ ಇಬ್ಬರು ಸಹೋದ್ಯೋಗಿಗಳು ಕಳೆದ ಆರು ತಿಂಗಳಿಂದ ಕಿರುಕುಳ ನೀಡುತ್ತಿದ್ದರು. ನಾನು ಕೆಲಸದ ನಿಮಿತ್ತ ಅಸ್ಸಾಂಗೆ ತೆರಳಿದ್ದೆ. ಈ ವೇಳೆ ಅವರ ಕಿರುಕುಳ ಇನ್ನಷ್ಟು ಹೆಚ್ಚಾಗಿದೆ. ಮನೆಗೆ ಬರುವಷ್ಟರಲ್ಲಿ ಪತ್ನಿ ಸಾವಿಗೆ ಶರಣಾಗಿದ್ದಾಳೆ ಎಂದು ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಇಬ್ಬರು ಶಿಕ್ಷಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.