HomeKarnatakaಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

ಗದಗ: ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶಪ್ಪ ಕಟ್ಟಿಮನಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ನನ್ನ ಸಾವಿಗೆ ಅಳಿಯಂದಿರು ಕಾರಣ ಎಂದು ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾಗಿ ಮೃತ ಈಶಪ್ಪ ಕಾರ್ಯನಿರ್ವಹಿಸುತ್ತಿದ್ದರು ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾತ್ರಿ ಪತ್ನಿಯೊಂದಿಗೆ ಈಶಪ್ಪ ಜಗಳವಾಡಿದ್ದು, ಈ ವೇಳೆ ಮನೆಗೆ ಬಂದ ಅಳಿಯಂದಿರು ಪ್ರಶ್ನಿಸಿ ನಮ್ಮ ತಂಗಿ ಜೊತೆ ಏಕೆ ಜಗಳ ಮಾಡ್ತೀಯಾ ಎಂದು ಹಿಂಸೆ ನೀಡಿ ಈಶಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ತಮ್ಮ ತಂಗಿಯನ್ನು ಕರೆದುಕೊಂಡು ಹೋಗಿದ್ದಾರೆ. ಇದರಿಂದ ಮನನೊಂದು ಈಶಪ್ಪ ನೇಣಿಗೆ ಶರಣಾಗಿದ್ದಾರೆ. ಗದಗ ಶಹರ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular