HomeKarnatakaSHOCKING: ಕೆಲಸದ ಒತ್ತಡಕ್ಕೆ ಬೇಸತ್ತು ಶಿಕ್ಷಕ ಆತ್ಮಹತ್ಯೆ

SHOCKING: ಕೆಲಸದ ಒತ್ತಡಕ್ಕೆ ಬೇಸತ್ತು ಶಿಕ್ಷಕ ಆತ್ಮಹತ್ಯೆ

ರಾಮನಗರ: ಕೆಲಸದ ಒತ್ತಡದಿಂದ ಬೇಸತ್ತು ಮುಖ್ಯ ಶಿಕ್ಷಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಕುವೆಂಪು ಬಡಾವಣೆಯಲ್ಲಿ ನಡೆದಿದೆ.

ಸುಖೇಂದ್ರ(58) ಮೃತಪಟ್ಟ ಶಿಕ್ಷಕ. ಎಲೆತೋಟದಳ್ಳಿಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಖೇಂದ್ರ ಕೆಲಸದ ಒತ್ತಡದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶಾಲೆಯಲ್ಲಿ ನಿಗದಿತ ಸಮಯಕ್ಕೆ ಎಲ್ಲಾ ಕೆಲಸ ಕಾರ್ಯ ಮುಗಿಸಬೇಕೆಂದು ಇಲಾಖೆಯಿಂದ ಒತ್ತಡ ಇದ್ದ ಕಾರಣ ಅವರು ವಿಷ ಸೇವಿಸಿರುವುದಾಗಿ ಪುತ್ರ ಹೇಮಂತ್ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular